ಸ್ಫೂರ್ತಿ ನ್ಯೂಸ್ಚ ಚಡಚಣ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ವಿಶ್ವ ಕನ್ನಡ ಬಳಗಬಾವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಭೀಮಾಶಂಕರಲಿಂಗ ಪ್ರೌಢಶಾಲೆ ಮುಖ್ಯ ಶಿಕ್ಷಕ ರಮೇಶ ನಾಯಕ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ ವಿಶ್ವ ಕನ್ನಡ ಬಳಗದ ಅಧ್ಯಕ್ಷ ಸದಾಶಿವ ಚೌಶೆಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವಂಬರ್ 1 ರಂದು ಹುಬ್ಬಳ್ಳಿಯ ಜಯಚಾಮರಾಜ ನಗರದ ಮಹಿಳಾ ಕಾಲೇಜು ಎದುರಿಗೆ ಅಕ್ಕನ ಬಳಗದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ರಮೇಶ ನಾಯಕ ಅವರಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷ ಜಿ ಎಸ್ ಕಾಂಬಳೆ ವಿಜಯಪುರ ಹಾಗೂ ಚಡಚಣ ತಾಲೂಕ ಸಮಿತಿಯ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.