ಚಡಚಣದ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ನಿವೃತ್ತ ಕನ್ನಡದ ಪ್ರಾಧ್ಯಾಪಕ ಪ್ರೊ . ಆರ್ ಪಿ ಬಗಲಿ ಅವರು ಮಾತನಾಡಿ, ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ,ಮಾನವ ಕುಲಕ್ಕೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ಹಿಂದಿನ ಕಾಲದ ಆದರ್ಶ ಮಹನೀಯರ ಉತ್ತಮ ವಿಚಾರಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಪ್ರಾಚಾರ್ಯಡಾ. ಎಸ್ ಬಿ ರಾಠೋಡ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಿದ್ಧಾಂತ ತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ . S F ಬಿರಾದಾರ, ಪ್ರೊ. B S ಪವಾರ, ಡಾ. ಎಸ್ ಎಸ್ ದೇಸಾಯಿ, ಶ್ರೀ ಎಸ್ ಎಸ್ ಅವಟಿ , ಆಳಗೊಂಡ ಪಾಟೀಲ ಅವರು ಹಾಗೂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Comments
Post a Comment